ಸಾಹಿತ್ಯ ಸುದ್ದಿ

ನಿಝಾಮ್ ಗೋಳಿಪಡ್ಪು ಅವರ ‘ಅನಾಮಧೇಯ ಗೀರುಗಳು’ ಅಪ್ರಕಟಿತ ಕವನ ಸಂಕಲನಕ್ಕೆ 2024ರ ‘ಈ ಹೊತ್ತಿಗೆ ಕಾವ್ಯ ಪ್ರಶಸ್ತಿ’

‘ಈ ಹೊತ್ತಿಗೆ ಕಾವ್ಯ ಪ್ರಶಸ್ತಿ’ ವಿಜೇತರಾದ ಶ್ರೀ. ನಿಝಾಮ್ ಗೋಳಿಪಡ್ಪು ಅವರು ಮಂಗಳೂರು ಜಿಲ್ಲೆಯ ಸಜೀಪನಡು ಗ್ರಾಮದವರು. ಅವಿಜ್ಞಾನಿ ಹೆಸರಲ್ಲಿ ಕವನಗಳನ್ನು ರಚಿಸಿರುವ ನಿಝಾಮ್ ಗೋಳಿಪಡ್ಪು ಅವರು ಪದವಿಪೂರ್ವದವರೆಗೆ ಅಭ್ಯಾಸ ಮಾಡಿ, ತಮ್ಮ ಊರಿನಲ್ಲಿ ಕೂಲಿ ಕಾರ್ಮಿಕರಾಗಿದ್ದಾರೆ. ‘ಅನಾಮಧೇಯ ಗೀರುಗಳು’ ಇವರ ಪ್ರಥಮ ಕೃತಿಯಾಗಿದೆ. ನಾಡಿನ ಖ್ಯಾತ ಕವಿ, ಪ್ರತಿಭಾ ನಂದಕುಮಾರ್ ಅವರು ಈ ಹೊತ್ತಿಗೆಯ ಕಾವ್ಯ ಪ್ರಶಸ್ತಿಯ ತೀರ್ಪುರಗಾರರಾಗಿದ್ದರು.

ಪ್ರಶಸ್ತಿಯು ರೂ. 10,000 ನಗದು ಹಾಗು ಪ್ರಶಸ್ತಿ ಫಲಕವನ್ನೊಳಗೊಂಡಿವೆ. ಇದೇ ಮಾರ್ಚ್ ತಿಂಗಳಲ್ಲಿ, ಬೆಂಗಳೂರಿನಲ್ಲಿ ನಡೆಯಲಿರುವ, ಈ ಹೊತ್ತಿಗೆಯ ಹೊನಲು ಕಾರ್ಯಕ್ರಮದಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

SHANKAR G

Recent Posts

ಹೀಗಿತ್ತು ಯೌವನಾಶ್ವ ಆಳುತ್ತಿದ್ದ ನಗರಿ – ಡಾ. ವಿಶ್ವನಾಥ್ ಏನ್. ನೇರಳಕಟ್ಟೆ

ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…

56 years ago

ಬೆಳಗಾವಿಯಲ್ಲಿ ಜುಲೈ 21ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಳಗಾವಿ ವಲಯದ (7 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು…

56 years ago

ತುಮಕೂರಿನಲ್ಲಿ ಜುಲೈ ೧೦ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವಲಯದ (8 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…

56 years ago