ಕೊಪ್ಪಳದಲ್ಲಿ ನಡೆದ ಗವಿಸಿದ್ಧ ಎನ್. ಬಳ್ಳಾರಿ ಕಾರ್ಯಕ್ರಮದಲ್ಲಿ ಕವಿ ಚನ್ನಪ್ಪ ಅಂಗಡಿ ಅವರ, ಮಿಂಚುಳ್ಳಿ ಸಾಹಿತ್ಯ ಪತ್ರಿಕೆ ಪ್ರಕಟಿಸಿರುವ “ಇನ್ನು ಕೊಟ್ಟೆನಾದೊಡೆ” ಕೃತಿಯು, ಕೊಪ್ಪಳ ವಿಶ್ವವಿದ್ಯಾಲದ ಕುಲಪತಿಗಳಾದ ಪ್ರೊ.ಬಿ.ಕೆ. ರವಿ, ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಅವರುಗಳಿಂದ ಲೋಕಾರ್ಪಣೆಗೊಂಡಿತು. ಇದೆ ಕಾರ್ಯಕ್ರಮದಲ್ಲಿ ೨೦೨೪ನೇ ಸಾಲಿನ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಯನ್ನು ಕವಿ ಚನ್ನಪ್ಪ ಅಂಗಡಿ ಅವರ “ಇನ್ನು ಕೊಟ್ಟೆನಾದೊಡೆ” ಮತ್ತು ರವಿ ಹಂಪಿ ಅವರ “ಪಿರಿಯಡ್ ಮಿಸ್ಸಾದಾಗ” ಕೃತಿಗಳಿಗೆ ಪ್ರದಾನ ಮಾಡಲಾಯಿತು.