೨೦೨೫ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಮುಖ್ಯ ಪ್ರಶಸ್ತಿಗೆ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಸಾಹಿತ್ಯ ಅಕಾಡೆಮಿಯ ಮುಖ್ಯ ಪ್ರಶಸ್ತಿಯ ನಿಯಮಗಳಲ್ಲಿ ಬಹಳಷ್ಟು ಬದಲಾವಣೆಯಾಗಿದ್ದು, ಇದೆ ಮೊದಲಬಾರಿಗೆ ಸಾರ್ವಜನಿಕವಾಗಿ ಅರ್ಜಿಯನ್ನು ಕರೆಯಲಾಗಿದೆ. ಸಾಹಿತ್ಯ ಅಕಾದೆಮಿಯು 2025ನೇ ಸಾಲಿನ ಸಾಹಿತ್ಯ ಅಕಾದೆಮಿ ಪ್ರಶಸ್ತಿಗಾಗಿ ಭಾರತೀಯ ಲೇಖಕರು, ಲೇಖಕರ ಹಿತೈಷಿಗಳು ಮತ್ತು ಪ್ರಕಾಶಕರಿಂದ ಪುಸ್ತಕಗಳನ್ನು ಆಹ್ವಾನಿಸುತ್ತದೆ. 2019, 2020, 2021, 2022 ಮತ್ತು 2023 (ಅಂದರೆ, 1 ಜನವರಿ 2019 ಮತ್ತು 31 ಡಿಸೆಂಬರ್ 2023ರ ನಡುವೆ) ಈ ವರ್ಷಗಳಲ್ಲಿ ಮೊದಲು ಪ್ರಕಟವಾದ ಪುಸ್ತಕವನ್ನು ಪ್ರಶಸ್ತಿಗಾಗಿ ಪರಿಗಣಿಸಲಾಗುತ್ತದೆ. ಅರ್ಜಿ ನಮೂನೆಯೊಂದಿಗೆ ಪ್ರತಿ ಪುಸ್ತಕದ ಪ್ರತಿಯನ್ನು 28 ಫೆಬ್ರವರಿ 2025 ರೊಳಗೆ ಸಲ್ಲಿಸಬೇಕು.
ಕೇಂದ್ರ ಸಾಹಿತ್ಯ ಅಕಾಡೆಮಿ ಮುಖ್ಯಪ್ರಶಸ್ತಿಯ ಬದಲಾವಣೆಗೊಂಡ ನಿಯಮಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
೨೦೨೪ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದ್ದು, ಶಿಷ್ಯರ ಪ್ರೀತಿಯ ಮೇಷ್ಟ್ರು ಕೆ.ವಿ. ನಾರಾಯಣ ಅವರ "ನುಡಿಗಳ ಅಳಿವು"…
ಪುಸ್ತಕ ಪರಿಶೆ; ಹಗಲಿರುಳು ಕನಸು ಕಂಡು ಆ ಕನಸನ್ನು ನನಸು ಮಾಡಿಕೊಳ್ಳುವ ಪ್ರಯತ್ನದಲ್ಲಿ ನಾವೆಲ್ಲ ತಂಡವಾಗಿ ಪರಿಚಾರಿಕೆ ಮಾಡುತ್ತಿದ್ದೇವೆ. ನಾಳೆಯೇ…
ಶ್ರೀಮತಿ ತ್ರಿವೇಣಿ ಶೆಲ್ಲಿಕೇರಿ ಪ್ರತಿಷ್ಠಾನ, ಯಂಡಿಗೇರಿ. ಜಿ. ಬಾಗಲಕೋಟೆ, ಇವರಿಂದ ರಾಜ್ಯಮಟ್ಟದ "ತ್ರಿವೇಣಿ ಶೆಲ್ಲಿಕೇರಿ ಸಾಹಿತ್ಯ ಪ್ರಶಸ್ತಿ-2024"ಕ್ಕೆ ಕೃತಿಗಳನ್ನು ಆಹ್ವಾನಿಸಿದೆ.…