ಸಾಹಿತ್ಯ ಸುದ್ದಿ

ಬೆಳಗಾವಿಯಲ್ಲಿ ಜುಲೈ 21ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಳಗಾವಿ ವಲಯದ (7 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ 21ರಂದು ಬೆಳಗಾವಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್. ಮುಕುಂದರಾಜ್ ಅವರು ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಗಾವಿ ಕನ್ನಡ ಭವನದ ನಿರ್ದೇಶಕರಾದ ಡಾ. ಬಸವರಾಜ ಜಗಜಂಪಿ ಅವರು ವಹಿಸುವರು. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಡಾ. ಮೈತ್ರೇಯಿಣಿ ಗಡಿಗೆಪ್ಪಗೌಡರ ಅವರು ಆಶಯನುಡಿಗಳನ್ನಾಡುವರು. ಯುವಕವಿಗೋಷ್ಠಿಯ ಅಧ್ಯಕ್ಷತೆಯನ್ನು ಯುವಕವಿ ದೇವರಾಜ ಹುಣಸಿಕಟ್ಟಿ ಅವರು ವಹಿಸಲಿದ್ದಾರೆ. ಯುವಕವಿಗೋಷ್ಠಿಯ ನಿರ್ವಹಣೆಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಶ್ರೀ ಮಹಾದೇವ ಬಸರಕೋಡ ಅವರು ಮಾಡಲಿದ್ದಾರೆ. ಇದೆ ಕಾರ್ಯಕ್ರಮದಲ್ಲಿ ಮಧ್ಯಾಹ್ನ ೨ ಗಂಟೆಗೆ ಡಾ. ಹೇಮಾ ಪಟ್ಟಣಶೆಟ್ಟಿ ಅವರು “ಕಾವ್ಯ – ಅನುಸಂಧಾನ” ಎನ್ನುವ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ. ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿಗಳಾದ ಕರಿಯಪ್ಪ ಎನ್., ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರುಗಳಾದ ಡಾ. ಮಲ್ಲಿಕಾರ್ಜುನ ಮಾನ್ಪಡೆ ಮತ್ತು ಬೆಳಗಾವಿ ಕನ್ನಡ ಭವನದ ಕಾರ್ಯದರ್ಶಿಗಳಾದ ಶ್ರೀ ಯ.ರು. ಪಾಟೀಲ ಉಪಸ್ಥಿತರಿರಲಿದ್ದಾರೆ.

SHANKAR G

Recent Posts

ಹೀಗಿತ್ತು ಯೌವನಾಶ್ವ ಆಳುತ್ತಿದ್ದ ನಗರಿ – ಡಾ. ವಿಶ್ವನಾಥ್ ಏನ್. ನೇರಳಕಟ್ಟೆ

ಅಣ್ಣ ಧರ್ಮಜನ ಬಗೆಗೆ ಹೂಮನಸ್ಸನ್ನಿಟ್ಟುಕೊಂಡು ಯೌವನಾಶ್ವನ ಅಶ್ವವನ್ನು ಗೆದ್ದುತರುವ ಹುಮ್ಮಸ್ಸಿನಲ್ಲಿ ವೃಷಧ್ವಜ ಮೇಘನಾದರ ಜೊತೆಗೆ ಹಸ್ತಿನಾವತಿಯಿಂದ ಹೊರಟಿದ್ದ ಅನಿಲಸುತನೀಗ ಭದ್ರಾವತಿ…

56 years ago

ತುಮಕೂರಿನಲ್ಲಿ ಜುಲೈ ೧೦ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವಲಯದ (8 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…

56 years ago

ಯಾಗದ ಬಗೆಯನ್ನು ವರ್ಣಿಸಿದರು ವ್ಯಾಸರು – ಡಾ. ವಿಶ್ವನಾಥ ಎನ್ ನೇರಳಕಟ್ಟ

ಅಶ್ವಮೇಧ ಯಾಗದ ಕುದುರೆ ಹೇಗಿದ್ದರೆ ಚೆನ್ನ ಎಂಬ ಮಾತು ಮುನಿವರ್ಯರಿಂದ ಮೂಡಿಬಂತು. ಕುದುರೆ ಸ್ವಚ್ಛವಾಗಿರಬೇಕು. ಶ್ವೇತವರ್ಣದಿಂದ ಕಂಗೊಳಿಸುತ್ತಿರಬೇಕು. ನೋಡುವುದಕ್ಕೆ ಆಕರ್ಷಕವಾಗಿರಬೇಕು.…

56 years ago