ಸಾಹಿತ್ಯ ಸುದ್ದಿ

ತುಮಕೂರಿನಲ್ಲಿ ಜುಲೈ ೧೦ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವಲಯದ (8 ಜಿಲ್ಲೆಗಳ) ಯುವಕವಿಗೋಷ್ಠಿ ಕಾರ್ಯಕ್ರಮ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕರ್ನಾಟಕ ಲೇಖಕಿಯರ ಸಂಘ ತುಮಕೂರು ಶಾಖೆ ಮತ್ತು ಜಿಲ್ಲಾ ಆಸ್ಪತ್ರೆ ಸಹಕಾರ ನೀಡಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್. ಮುಕುಂದರಾಜ್ ಅವರು ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಮಕೂರಿನ ಲೇಖಕಿಯರ ಸಂಘದ ಅಧ್ಯಕ್ಷರಾದ ಮಲ್ಲಿಕಾ ಬಸವರಾಜು ಅವರು ವಹಿಸುವರು. ಯುವಕವಿಗೋಷ್ಠಿಯ ಅಧ್ಯಕ್ಷತೆಯನ್ನು ಯುವಕವಿ ಸೂರ್ಯಕೀರ್ತಿ ಅವರು ವಹಿಸಲಿದ್ದಾರೆ. ಯುವಕವಿಗೋಷ್ಠಿಯ ನಿರ್ವಹಣೆಯನ್ನು ಹಿರಿಯ ಪತ್ರಕರ್ತರಾದ ಗಣೇಶ ಅಮೀನಗಡ ಅವರು ಮಾಡಲಿದ್ದಾರೆ. ಇದೆ ಕಾರ್ಯಕ್ರಮದಲ್ಲಿ ಮಧ್ಯಾಹ್ನ ೨ ಗಂಟೆಗೆ ಡಾ. ನಟರಾಜ್ ಹುಳಿಯಾರ್ ಅವರು “ಕಾವ್ಯ ಎನ್ನುವುದು ಎಲ್ಲಿದೆ?” ಎನ್ನುವ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಅಸ್ಗರ್ ಬೇಗ್, ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿಗಳಾದ ಕರಿಯಪ್ಪ ಎನ್., ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರುಗಳಾದ ಪಿ. ಚಂದ್ರಿಕಾ, ಡಾ. ರವಿಕುಮಾರ್ ಬಾಗಿ, ಡಾ. ಕಾ.ವೆಂ. ಶ್ರೀನಿವಾಸಮೂರ್ತಿ, ಸುಮಾ ಸತೀಶ್ ಮತ್ತು ಅಕ್ಕಯ್ ಪದ್ಮಶಾಲಿ ಉಪಸ್ಥಿತರಿರಲಿದ್ದಾರೆ.

SHANKAR G

View Comments

  • ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಎಲ್ಲಾ ಕವಿಮಿತ್ರರಿಗೂ ಕಾರ್ಯಕ್ರಮ ಆಯೋಜಕರಿಗೂ ಶುಭವಾಗಲಿ.

  • ಕಾರ್ಯಕ್ರಮ ಯಶಸ್ವಿಯಾಗಲಿ.ಹಾಗೂ ಕವಿಗೋಷ್ಠಿ ಯಲ್ಲಿ ಭಾಗವಹಿಸಲು ನನಗೂ ಅವಕಾಶ ಸಿಕ್ಕಿದ್ದು ಇನ್ನಷ್ಟು ಖುಷಿಯಾಗಿದೆ.

    • ಅಭಿನಂದನೆಗಳು ಸಂತೋಷ್. ಕಾರ್ಯಕ್ರಮ ಯಶಸ್ವಿಯಾಗಿ ಜರುಗಲಿ. ಶುಭವಾಗಲಿ.

Recent Posts

ಯಾಗದ ಬಗೆಯನ್ನು ವರ್ಣಿಸಿದರು ವ್ಯಾಸರು – ಡಾ. ವಿಶ್ವನಾಥ ಎನ್ ನೇರಳಕಟ್ಟ

ಅಶ್ವಮೇಧ ಯಾಗದ ಕುದುರೆ ಹೇಗಿದ್ದರೆ ಚೆನ್ನ ಎಂಬ ಮಾತು ಮುನಿವರ್ಯರಿಂದ ಮೂಡಿಬಂತು. ಕುದುರೆ ಸ್ವಚ್ಛವಾಗಿರಬೇಕು. ಶ್ವೇತವರ್ಣದಿಂದ ಕಂಗೊಳಿಸುತ್ತಿರಬೇಕು. ನೋಡುವುದಕ್ಕೆ ಆಕರ್ಷಕವಾಗಿರಬೇಕು.…

56 years ago

ಆತ್ಮಸ್ಥೈರ್ಯದ ಬೆಳಕು ನಮ್ಮ ಮುಂದಿರಲಿ.. – ಲಿಖಿತ್ ಹೊನ್ನಾಪುರ

ನಿಲ್ಲುವುದೇ ಸಾವು ಚಲಿಸುವುದೇ ಬಾಳು – ಕುವೆಂಪು ನಮ್ಮ ಬದುಕಿನಲ್ಲಿ ಸಾಯುವುದೆಂದರೆ ಏನು? ಚಲನೆಯಿಲ್ಲದೆ ಕಾಲ ಹಾಯಿಸುವುದೇನು? ಬದಲಾವಣೆ, ಚಟುವಟಿಕೆ,…

56 years ago

ಜೂನ್ 2025 ಮಿಂಚುಳ್ಳಿ ಸಂಚಿಕೆ

ಜೂನ್ 2025 ಮಿಂಚುಳ್ಳಿ ಸಂಚಿಕೆ ಓದಲು ಇಲ್ಲಿ ಕ್ಲಿಕ್ ಮಾಡಿ

56 years ago

ಧರ್ಮವೀರನ ಚಿತ್ತ ಖಿನ್ನತೆ – ಡಾ. ವಿಶ್ವನಾಥ ಎನ್ ನೇರಳಕಟ್ಟೆ

ಆಗ ತಾನೇ ಕುರುಕ್ಷೇತ್ರ ಯುದ್ಧ ಮುಗಿದಿತ್ತು. ಆದರೆ ನನ್ನ ಅಗ್ರಜನೆನಿಸಿಕೊಂಡ ಧರ್ಮಜನ ಚಿತ್ತದೊಳಗೆ ಕಲಹವೊಂದು ಆರಂಭವಾಗಿತ್ತು. ಅದು ಧರ್ಮ ಅಧರ್ಮಗಳ…

56 years ago

ಪುರಾಣ ಕಥನದ ಅಪೂರ್ವ ರಂಗ ಪ್ರಯೋಗ “ಶರ್ಮಿಷ್ಠೆ” – ನಾ ದಿವಾಕರ

ಏಕ ವ್ಯಕ್ತಿಯಲ್ಲಿ ಬಹು ಚಹರೆಗಳನ್ನು ಬಿಂಬಿಸುವ ಕಲಾಪ್ರೌಢಿಮೆಯ ಸೃಜನಶೀಲ ಪ್ರಯತ್ನ ರಂಗ ಸಂಪದ ಬೆಂಗಳೂರು ಕರ್ನಾಟಕದ ರಂಗಭೂಮಿಯನ್ನು ಕಳೆದ ಐದು…

56 years ago

ಮೇ 2025 ಮಿಂಚುಳ್ಳಿ ಸಂಚಿಕೆ

ಮೇ ೨೦೨೫ ಮಿಂಚುಳ್ಳಿ ಸಂಚಿಕೆ ಓದಲು ಇಲ್ಲಿ ಕ್ಲಿಕ್ ಮಾಡಿ

56 years ago