ಬೆಂಗಳೂರು,ಜು-23
ಕರ್ನಾಟಕದಲ್ಲಿ ಅತ್ಯಂತ ಧೈರ್ಯಶಾಲಿ ಮಹಿಳಾ ಲೇಖಕಿಯರ ಕೊರತೆ ಇಲ್ಲ ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಾಗೂ ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ ಅಭಿಮತ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಲೇಖಕಿಯರ ಸಂಘ ಆಯೋಜಿಸಿದ್ದ ದತ್ತಿ ಪ್ರಶಸ್ತಿಗಳ ಸಮಾರಂಭಕ್ಕೆ ಚಾಲನೆ ನೀಡಿ ಚಂದ್ರಶೇಖರ ಕಂಬಾರ ಮಾತನಾಡಿದರು.
ಸರ್ಕಾರದ ಮೇಲೆ ಒತ್ತಡ ಹೇರಿ ಸೌಲಭ್ಯಗಳನ್ನು ಪಡೆಯುವ ಹಕ್ಕನ್ನು ಮಂಡಿಸುವ ಕೆಲಸ ಮಹಿಳಾ ಲೇಖಕಿಯರ ಸಂಘ ಮಾಡುತ್ತಿರುವುದಕ್ಕೆ ಕಂಬಾರರು ಸಂತಸ ವ್ಯಕ್ತಪಡಿಸಿದರು. ಅದರಲ್ಲೂ ಮಹಿಳೆಯರಿಗೆ ಪ್ರತ್ಯಕವಾಗಿ ಸಂಘ ಕಟ್ಟಿ ವಿಶೇಷ ಸೌಲಭ್ಯ ಕೇಳ್ತಿರುವುದು ನಮ್ಮ ರಾಜ್ಯದಲ್ಲಿ ಮಾತ್ರ ಎಂದು ಸಂಘದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗು ಧೈರ್ಯವಂತ ಲೇಖಕಿಯರ ಕೊರತೆ ರಾಜ್ಯದಲ್ಲಿ ಇಲ್ಲ ಎಂದು ಹೇಳಿದ್ದಾರೆ. ಪುರುಷರನ್ನು ಮೀರಿಸುವಂತ ಮಹಿಳಾ ಲೇಖಕಿಯರು ನಮ್ಮಲ್ಲಿದ್ದು, ಕನ್ನಡ ಭಾಷೆಯಲ್ಲಿ ತಮ್ಮ ಅಸ್ತಿತ್ವವನ್ನು ಗುರುತಿಸಿಕೊಂಡಿದ್ದಾರೆ. ಇದು ಮಹಿಳೆಯರ ಮೇಲಿನ ಅಭಿಮಾನ ಹೆಚ್ಚಿಸುತ್ತಿದೆ ಎಂದರು. ಮಹಿಳೆಯರ ಅಸ್ಮಿಯತೆಯನ್ನು ಎತ್ತಿ ಹಿಡಿಯೊ ಹಠವಾದಿ ಮಹಿಳೆಯರ ಛಲ ನಿಜಕ್ಕು ಸ್ವಾಗತಾರ್ಹ ಎಂದ ಕಂಬಾರರು ಇಂತಹ ಛಲಗಾರಿಕೆಯುಳ್ಳ ಮಹಿಳಾ ಲೇಖಕಿಯರು ಬೇರೆ ಭಾಷೆಯಲ್ಲಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಉಳಿದ ಭಾಷೆಗಳಿಗೆ ಕನ್ನಡ ಭಾಷೆಯ ಮಹಿಳಾ ಲೇಖಕಿಯರು ಮಾದರಿಯಾಗಿದ್ದಾರೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯ ಹಿರಿಯ ಸಾಹಿತಿ ಪ್ರಾಧ್ಯಾಪಕಿ ಡಾ. ಮುಮ್ತಾಜ್ ಬೇಗಂ ಅವರಿಗೆ ಸಮಗ್ರ ಸಾಹಿತ್ಯ ಸಾಧನೆಗಾಗಿ ಕೆ.ಟಿ.ಬನಶಂಕರಮ್ಮ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಲ್ಲದೇ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ವಿವಿಧ ಕೃತಿಗಳ ಲೇಖಕಿಯರಿಗೂ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಾಜಿ ಸಚಿವೆ ರಾಣಿ ಸತೀಶ್, ಸಂಘದ ರಾಜ್ಯಧ್ಯಕ್ಷೆ ಎಚ್. ಎಲ್. ಪುಷ್ಪಾ ಸೇರಿ ಹಲವರು ವೇದಿಕೆಯಲ್ಲಿದ್ದರು.
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಯುವಕವಿಗೋಷ್ಠಿಗೆ ಒಟ್ಟು ೨೩ ಯುವಕವಿಗಳು ಆಯ್ಕೆಯಾಗಿದ್ದು, ಜುಲೈ ೧೦ರಂದು ತುಮಕೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…
ಅಶ್ವಮೇಧ ಯಾಗದ ಕುದುರೆ ಹೇಗಿದ್ದರೆ ಚೆನ್ನ ಎಂಬ ಮಾತು ಮುನಿವರ್ಯರಿಂದ ಮೂಡಿಬಂತು. ಕುದುರೆ ಸ್ವಚ್ಛವಾಗಿರಬೇಕು. ಶ್ವೇತವರ್ಣದಿಂದ ಕಂಗೊಳಿಸುತ್ತಿರಬೇಕು. ನೋಡುವುದಕ್ಕೆ ಆಕರ್ಷಕವಾಗಿರಬೇಕು.…
ನಿಲ್ಲುವುದೇ ಸಾವು ಚಲಿಸುವುದೇ ಬಾಳು – ಕುವೆಂಪು ನಮ್ಮ ಬದುಕಿನಲ್ಲಿ ಸಾಯುವುದೆಂದರೆ ಏನು? ಚಲನೆಯಿಲ್ಲದೆ ಕಾಲ ಹಾಯಿಸುವುದೇನು? ಬದಲಾವಣೆ, ಚಟುವಟಿಕೆ,…
ಆಗ ತಾನೇ ಕುರುಕ್ಷೇತ್ರ ಯುದ್ಧ ಮುಗಿದಿತ್ತು. ಆದರೆ ನನ್ನ ಅಗ್ರಜನೆನಿಸಿಕೊಂಡ ಧರ್ಮಜನ ಚಿತ್ತದೊಳಗೆ ಕಲಹವೊಂದು ಆರಂಭವಾಗಿತ್ತು. ಅದು ಧರ್ಮ ಅಧರ್ಮಗಳ…
ಏಕ ವ್ಯಕ್ತಿಯಲ್ಲಿ ಬಹು ಚಹರೆಗಳನ್ನು ಬಿಂಬಿಸುವ ಕಲಾಪ್ರೌಢಿಮೆಯ ಸೃಜನಶೀಲ ಪ್ರಯತ್ನ ರಂಗ ಸಂಪದ ಬೆಂಗಳೂರು ಕರ್ನಾಟಕದ ರಂಗಭೂಮಿಯನ್ನು ಕಳೆದ ಐದು…