ತ್ರಿವೇಣಿ ಶೆಲ್ಲಿಕೇರಿ ಸಾಹಿತ್ಯ ಪ್ರಶಸ್ತಿಗೆ ಕೃತಿಗಳ ಆಹ್ವಾನ

ಶ್ರೀಮತಿ ತ್ರಿವೇಣಿ ಶೆಲ್ಲಿಕೇರಿ ಪ್ರತಿಷ್ಠಾನ, ಯಂಡಿಗೇರಿ. ಜಿ.ಬಾಗಲಕೋಟೆ, ಇವರಿಂದ ರಾಜ್ಯಮಟ್ಟದ “ತ್ರಿವೇಣಿ ಶೆಲ್ಲಿಕೇರಿ ಸಾಹಿತ್ಯ ಪ್ರಶಸ್ತಿ” ಗಾಗಿ ಕೃತಿಗಳನ್ನು ಆಹ್ವಾನಿಸಿದೆ. ಆಸಕ್ತ ಲೇಖಕರು,ಪ್ರಕಾಶಕರು ಕಥೆ, ಕವನ, ಕಾದಂಬರಿ ಈ ಮೂರು ಸಾಹಿತ್ಯ ಪ್ರಕಾರಗಳ ಕೃತಿಗಳನ್ನು ಕಳುಹಿಸಬಹುದು.

ಯಾವುದೇ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಎಂ.ಫಿಲ್ ಅಥವಾ ಪಿಎಚ್.ಡಿ ಪ್ರಬಂಧಗಳನ್ನು ಹಾಗೂ ಸಂಪಾದನೆ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸುವುದಿಲ್ಲ.  2023 ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡಿರುವ ಕೃತಿಗಳ ಮೂರು ಪ್ರತಿಗಳನ್ನು ಕಳುಹಿಸಬೇಕು. ಕೃತಿಗಳ ಲಕೋಟೆಯ ಮೇಲೆ ರಾಜ್ಯಮಟ್ಟದ “ತ್ರಿವೇಣಿ ಶೆಲ್ಲಿಕೇರಿ ಸಾಹಿತ್ಯ ಪ್ರಶಸ್ತಿ” ಗಾಗಿ ಎಂಬುದನ್ನು ನಮೂದಿಸಬೇಕು. ಕೃತಿಗಳನ್ನು ಡಿಸೆಂಬರ್ 31 ,2023 ರೊಳಗೆ ಕಳುಹಿಸಬೇಕು. ನಂತರ ಬಂದ ಕೃತಿಗಳನ್ನು ಪರಿಗಣಿಸಲಾಗುವುದಿಲ್ಲ.

ಫೆಬ್ರವರಿ ತಿಂಗಳು ಬಾಗಲಕೋಟೆಯಲ್ಲಿ ಆಯೋಜಿಸುವ ಸಮಾರಂಭದಲ್ಲಿ ಆಯ್ಕೆಯಾದ ಕೃತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ಮೂರು ಪ್ರಕಾರಗಳಿಗೆ ತಲಾ ರೂ, 10,000/- ನಗದು ಬಹುಮಾನ, ಪ್ರಶಸ್ತಿಫಲಕ ಹಾಗೂ ಸನ್ಮಾನ ಒಳಗೊಂಡಿರುತ್ತದೆಯೆಂದು ಪತ್ರಿಕಾ ಪ್ರಕಟಣೆಯಲ್ಲಿ ಪ್ರತಿಷ್ಠಾನದ ಅಧ್ಯಕ್ಷರಾದ ಮಲ್ಲಿಕಾರ್ಜುನ ಶೆಲ್ಲಿಕೇರಿ ತಿಳಿಸಿರುತ್ತಾರೆ.

ಕೃತಿಗಳನ್ನು ಮಲ್ಲಿಕಾರ್ಜುನ ಶೆಲ್ಲಿಕೇರಿ, #19/1/1, ಸಿರಿ, ಈಶ್ವರ ದೇವಸ್ಥಾನ ಹತ್ತಿರ, 22 ನೇಕ್ರಾಸ್, ವಿದ್ಯಾಗಿರಿ, ಬಾಗಲಕೋಟೆ-587102.ವಿಳಾಸಕ್ಕೆ ಕಳುಹಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.6361427715 ಸಂಪರ್ಕಿಸಲು ಕೋರಿದೆ.

ಚಂದಾದಾರರಾಗಿ
ವಿಭಾಗ
0 ಪ್ರತಿಕ್ರಿಯೆಗಳು
Inline Feedbacks
View all comments
0
    0
    Your Cart
    Your cart is emptyReturn to Shop