ಶ್ರೀಮತಿ ತ್ರಿವೇಣಿ ಶೆಲ್ಲಿಕೇರಿ ಪ್ರತಿಷ್ಠಾನ, ಯಂಡಿಗೇರಿ. ಜಿ.ಬಾಗಲಕೋಟೆ, ಇವರಿಂದ ರಾಜ್ಯಮಟ್ಟದ “ತ್ರಿವೇಣಿ ಶೆಲ್ಲಿಕೇರಿ ಸಾಹಿತ್ಯ ಪ್ರಶಸ್ತಿ” ಗಾಗಿ ಕೃತಿಗಳನ್ನು ಆಹ್ವಾನಿಸಿದೆ. ಆಸಕ್ತ ಲೇಖಕರು,ಪ್ರಕಾಶಕರು ಕಥೆ, ಕವನ, ಕಾದಂಬರಿ ಈ ಮೂರು ಸಾಹಿತ್ಯ ಪ್ರಕಾರಗಳ ಕೃತಿಗಳನ್ನು ಕಳುಹಿಸಬಹುದು.
ಯಾವುದೇ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಎಂ.ಫಿಲ್ ಅಥವಾ ಪಿಎಚ್.ಡಿ ಪ್ರಬಂಧಗಳನ್ನು ಹಾಗೂ ಸಂಪಾದನೆ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸುವುದಿಲ್ಲ. 2023 ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡಿರುವ ಕೃತಿಗಳ ಮೂರು ಪ್ರತಿಗಳನ್ನು ಕಳುಹಿಸಬೇಕು. ಕೃತಿಗಳ ಲಕೋಟೆಯ ಮೇಲೆ ರಾಜ್ಯಮಟ್ಟದ “ತ್ರಿವೇಣಿ ಶೆಲ್ಲಿಕೇರಿ ಸಾಹಿತ್ಯ ಪ್ರಶಸ್ತಿ” ಗಾಗಿ ಎಂಬುದನ್ನು ನಮೂದಿಸಬೇಕು. ಕೃತಿಗಳನ್ನು ಡಿಸೆಂಬರ್ 31 ,2023 ರೊಳಗೆ ಕಳುಹಿಸಬೇಕು. ನಂತರ ಬಂದ ಕೃತಿಗಳನ್ನು ಪರಿಗಣಿಸಲಾಗುವುದಿಲ್ಲ.
ಫೆಬ್ರವರಿ ತಿಂಗಳು ಬಾಗಲಕೋಟೆಯಲ್ಲಿ ಆಯೋಜಿಸುವ ಸಮಾರಂಭದಲ್ಲಿ ಆಯ್ಕೆಯಾದ ಕೃತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ಮೂರು ಪ್ರಕಾರಗಳಿಗೆ ತಲಾ ರೂ, 10,000/- ನಗದು ಬಹುಮಾನ, ಪ್ರಶಸ್ತಿಫಲಕ ಹಾಗೂ ಸನ್ಮಾನ ಒಳಗೊಂಡಿರುತ್ತದೆಯೆಂದು ಪತ್ರಿಕಾ ಪ್ರಕಟಣೆಯಲ್ಲಿ ಪ್ರತಿಷ್ಠಾನದ ಅಧ್ಯಕ್ಷರಾದ ಮಲ್ಲಿಕಾರ್ಜುನ ಶೆಲ್ಲಿಕೇರಿ ತಿಳಿಸಿರುತ್ತಾರೆ.
ಕೃತಿಗಳನ್ನು ಮಲ್ಲಿಕಾರ್ಜುನ ಶೆಲ್ಲಿಕೇರಿ, #19/1/1, ಸಿರಿ, ಈಶ್ವರ ದೇವಸ್ಥಾನ ಹತ್ತಿರ, 22 ನೇಕ್ರಾಸ್, ವಿದ್ಯಾಗಿರಿ, ಬಾಗಲಕೋಟೆ-587102.ವಿಳಾಸಕ್ಕೆ ಕಳುಹಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.6361427715 ಸಂಪರ್ಕಿಸಲು ಕೋರಿದೆ.
ಪ್ರೀತಿಯ ಓದುಗರೇ, ನಿಮ್ಮ ಬೆಂಬಲದಿಂದಾಗಿ ಮಿಂಚುಳ್ಳಿ ಪ್ರಕಾಶನದಲ್ಲಿ ಪ್ರಕಟಿಸಿರುವ ಎಲ್ಲ ಪುಸ್ತಕಗಳ ಪ್ರತಿಗಳು ಖಾಲಿಯಾಗಿವೆ. ವಿಶೇಷವಾಗಿ "ಬಿದಿರ ತಡಿಕೆ", "ಮಳೆ…
ದಿನಾಂಕ 24/11/2024ರಂದು ಕೊಪ್ಪಳದ ಸರ್ಕಾರಿ ನೌಕರರ ಭವನದಲ್ಲಿ ೨೦೨೪ನೇ ಸಾಲಿನ ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವ ಕಾರ್ಯಕ್ರಮ ನಡೆಯಲಿದೆ.…
ಎಲ್ಲರೂ ಸೌಖ್ಯವಾಗಿದ್ದೀರಿ ಎಂಬ ಭಾವದೊಂದಿಗೆ ತಮ್ಮ ಮುಂದೆ ಗಜಲ್ ಗಂಗೋತ್ರಿಯ ಸಮೇತ ಅದೂ ಗಜಲ್ ಬಾನಂಗಳದಲ್ಲಿ ಮಿಂಚಿ ಮರೆಯಾದ ಶಾಯರ್…