ಸಾಹಿತ್ಯ ಸುದ್ದಿ

2023ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ಕಾವ್ಯ ಹಸ್ತಪ್ರತಿ ಆಹ್ವಾನ

ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-2023’ ಕ್ಕಾಗಿ ಕನ್ನಡದ ಕವಿ/ಕವಿಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು ಐವತ್ತರ ಒಳಗಿರುವ ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ.

ಅನುವಾದಿತ ಕವಿತೆಗಳು ಬೇಡ.

ಚುಟುಕು, ಹನಿಗವನಗಳು ಬೇಡ.

ಈ ಪ್ರಶಸ್ತಿಯು ರೂ.10000/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಆಸಕ್ತರು ತಮ್ಮ ಹೊಸ ಕವಿತೆಗಳ ಹಸ್ತಪ್ರತಿಯನ್ನು ಸ್ಪರ್ಧೆಗೆ ಕಳುಹಿಸಲು ವಿನಂತಿಸಲಾಗಿದೆ.

ವಿ.ಸೂ; ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ. ಮೇಲ್ ಮೂಲಕ ಕಳಿಸುವದಕ್ಕಿಂತ ಡಿಟಿಪಿ ಮಾಡಿದ ಹಸ್ತಪ್ರತಿ ಕಳಿಸಿಕೊಡಬೇಕು. ಬರವಣಿಗೆ ಮಾಡಿದ ಹಸ್ತಪ್ರತಿಯನ್ನೂ ಕಳಿಸಬಹುದು.

ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ; ಜುಲೈ 10

ಹಸ್ತಪ್ರತಿಯನ್ನು ಕಳುಹಿಸಬೇಕಾದ ವಿಳಾಸ;

ಸುನಂದಾ, ಪ್ರಕಾಶ ಕಡಮೆ
ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-2023
ನಂ. ೯೦, ‘ನಾಗಸುಧೆ ಜಗಲಿ’
೬/ಬಿ ಕ್ರಾಸ್, ಕಾಳಿದಾಸನಗರ,
ವಿದ್ಯಾನಗರ ವಿಸ್ತೀರ್ಣ
ಹುಬ್ಬಳ್ಳಿ- ೫೮೦೦೩೧
ದೂರವಾಣಿ; ೯೮೪೫೭೭೯೩೮೭

SHANKAR G

View Comments

  • ಎಸ್ಟು ಕವನಗಳ ಹಸ್ತ ಪ್ರತಿ ಕಳುಹಿಸಬೇಕು

Recent Posts

ಇದೇ ಭಾನುವಾರ ಕೊಪ್ಪಳದಲ್ಲಿ ಕವಿ ಚನ್ನಪ್ಪ ಅಂಗಡಿ ಅವರ “ಇನ್ನು ಕೊಟ್ಟೆನಾದೊಡೆ” ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ.

ಪ್ರೀತಿಯ ಓದುಗರೇ, ನಿಮ್ಮ ಬೆಂಬಲದಿಂದಾಗಿ ಮಿಂಚುಳ್ಳಿ ಪ್ರಕಾಶನದಲ್ಲಿ ಪ್ರಕಟಿಸಿರುವ ಎಲ್ಲ ಪುಸ್ತಕಗಳ ಪ್ರತಿಗಳು ಖಾಲಿಯಾಗಿವೆ. ವಿಶೇಷವಾಗಿ "ಬಿದಿರ ತಡಿಕೆ", "ಮಳೆ…

55 years ago

ಕೊಪ್ಪಳದಲ್ಲಿ 2024ನೇ ಸಾಲಿನ ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವ

ದಿನಾಂಕ 24/11/2024ರಂದು ಕೊಪ್ಪಳದ ಸರ್ಕಾರಿ ನೌಕರರ ಭವನದಲ್ಲಿ ೨೦೨೪ನೇ ಸಾಲಿನ ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವ ಕಾರ್ಯಕ್ರಮ ನಡೆಯಲಿದೆ.…

55 years ago

ದೇವೇಂದ್ರ ಕಟ್ಟಿಮನಿ ಅವರ ಗಜಲ್ ಗಳಲ್ಲಿ ಕ್ರೀಡಾ ಮನೋಭಾವ; ಡಾ. ಮಲ್ಲಿನಾಥ ಎಸ್. ತಳವಾರ

ಎಲ್ಲರೂ ಸೌಖ್ಯವಾಗಿದ್ದೀರಿ ಎಂಬ ಭಾವದೊಂದಿಗೆ ತಮ್ಮ ಮುಂದೆ ಗಜಲ್ ಗಂಗೋತ್ರಿಯ ಸಮೇತ ಅದೂ ಗಜಲ್ ಬಾನಂಗಳದಲ್ಲಿ ಮಿಂಚಿ ಮರೆಯಾದ ಶಾಯರ್…

55 years ago